ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಜಯಭೇರಿ
ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೋಡಿಂಬಾಡಿ ಅಶೋಕ್ ಕುಮಾರ್ ಚುನಾಯಿತರಾಗಿದ್ದಾರೆ. ಜಿದ್ದಾಜಿದ್ದಿನಿಂದ ಕೂಡಿದ್ದ ಪುತ್ತೂರು ಕ್ಷೇತ್ರದಲ್ಲಿ ಕೊನೆಗೂ ಅಶೋಕ್ ಕುಮಾರ್ ರೈ ಅವರ ಕೈ ಮೇಲಾಗಿದ್ದು ಗೆಲುವಿನ ನಗೆ ಬೀರಿದ್ದಾರೆ.

ಬಿಜೆಪಿ ತೆಕ್ಕೆಯಲ್ಲಿದ್ದ ಅಧಿಕಾರವನ್ನು ವಶಕ್ಕೆ ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಅಶೋಕ್ ಕುಮಾರ್ ರೈ ಗೆಲುವಿಗೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.
ವಿವಿಧ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿರುವ ಅಶೋಕ್ ಕುಮಾರ್ ರೈ ಅವರು ಬಡವರ ಬಂಧು ಎನ್ನುವುದು ಚುನಾವಣೆಯಲ್ಲೂ ಸಾಬೀತಾದಂತಾಗಿದೆ. ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಪೈಪೋಟಿ ನೀಡುವಲ್ಲಿ ಯಶಸ್ವಿಯಾಗಿದ್ದರು. ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಿರಾಸೆ ಅನುಭವಿಸಿದ್ದಾರೆ.