ಇಂದು ಸಂಜೆ ಕಾಂಗ್ರೆಸ್ ಶಾಸಕರ ಸಭೆ; ಶಾಸಕಾಂಗ ಪಕ್ಷದ ನಾಯಕನ ಆಯ್ಕೆ
ಬೆಂಗಳೂರು: ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕರ ಸಭೆ ಇಂದು (ಮೇ 14) ಸಂಜೆ 5.30ಕ್ಕೆ ನಡೆಯಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.

ಸಭೆಯಲ್ಲಿ ಎಲ್ಲ ಕಾಂಗ್ರೆಸ್ ಶಾಸಕರು ಭಾಗವಹಿಸಲಿದ್ದು ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ ಎನ್ನಲಾಗಿದೆ. ಆಯ್ಕೆಯಾದ ನಾಯಕ ನೂತನ ಮುಖ್ಯಮಂತ್ರಿಯಾಗಿ ಮೇ 15 ಪ್ರಮಾಣವಚನ ಸ್ವೀಕರಿಸಲಿದ್ದು ಅಂದೇ ನೂತನ ಸಚಿವರ ಪ್ರಮಾಣವಚನವೂ ನಡೆಯುವ ಸಾಧ್ಯತೆಯಿದೆ.
ಶಾಸಕಾಂಗ ಪಕ್ಷದ ನಾಯಕನಾಗಿ ಬಹುತೇಕ ಸಿದ್ದರಾಮಯ್ಯ ಆಯ್ಕೆಯಾಗುವ ಸಾಧ್ಯತೆ ಇದೆ. ಮೂರು ಉಪ ಮುಖ್ಯಮಂತ್ರಿ ಹುದ್ದೆಯನ್ನು ಉಂಟು ಮಾಡಿ ಹಂಚಿಕೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ.