ಚುನಾವಣೆಯಲ್ಲಿ ಸೋಲು: ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಬಿಜೆಪಿಯ ಎಂ.ಪಿ ರೇಣುಕಾಚಾರ್ಯ
ಬಿಜೆಪಿಯ ಎಂಪಿ ರೇಣುಕಾಚಾರ್ಯ ಅವರು ಚುನಾವಣೆಯಲ್ಲಿ ಸೋತ ಬಳಿಕ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಈ ಬಾರಿ ಚುನಾವಣೆಯಲ್ಲಿ ಸೋಲಾಗಿರುವ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಅವರು ಮುಂದಕ್ಕೆ ಯಾವುದೇ ಕಾರಣಕ್ಕೂ ಚುನಾವಣೆಗೆ ಬರುವುದಿಲ್ಲ ಎಂದು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಚುನಾವಣೆ ಫಲಿತಾಂಶದ ಬಳಿಕ ಹೊನ್ನಾಳಿಯಲ್ಲಿ ಬೆಂಬಲಿಗರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.