ಪುತ್ತೂರಿನಲ್ಲಿ ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್- ಇಬ್ಬರು ಅರೆಸ್ಟ್
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಮಾಜಿ ಸಚಿವ, ಸಂಸದ ಡಿ ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಚಪ್ಪಲಿ ಹಾರ ಹಾಕಿ ಮೇ 15 ರಂದು ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿರುವ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನರಿಮೊಗರು ಸಮೀಪದ ವಿಶ್ವನಾಥ್ ಮತ್ತು ಮಾಧವ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.





