ಮುಖ್ಯ ಮಂತ್ರಿಯಾಗಿ ಸಿದ್ದರಾಮಯ್ಯ ಬಹುತೇಕ ಖಚಿತ
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಖಚಿತ ಆಗಿದೆ. ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಘೋಷಣೆ ಬಾಕಿ ಇದ್ದು ರಾಹುಲ್ ಗಾಂಧಿ ಭೇಟಿ ಬಳಿಕ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.

ಡಿಕೆಶಿ ಕೂಡಾ ಸಿಎಂ ರೇಸ್ ನಲ್ಲಿದ್ದು ರಾಹುಲ್ ಗಾಂಧಿಯವರು ಸಿದ್ದರಾಮಯ್ಯ, ಡಿಕೆಶಿ ಜತೆ ಮಾತುಕತೆ ನಡೆಸಿ ಚರ್ಚೆ ಬಳಿಕ ಘೋಷಣೆ ಸಾಧ್ಯತೆಯಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗುವುದು ಪಕ್ಕಾ ಎನ್ನಲಾಗಿದ್ದು ಕೆಲವೇ ಹೊತ್ತಲ್ಲಿ ಘೋಷಣೆ ಆಗಬಹುದು ಎನ್ನಲಾಗಿದೆ.