ಗೊಂದಲಗಳಿಗೆ ತೆರೆ ಎಳೆದ ಹೈಕಮಾಂಡ್: ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ
ಮುಖ್ಯಮಂತ್ರಿ ಆಯ್ಕೆ ವಿಚಾರಕ್ಕೆ ಹೈಕಮಾಂಡ್ ಅಂತಿಮ ಮುದ್ರೆ ಒತ್ತಿದ್ದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದೆ. ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಆಯ್ಕೆ ಮಾಡಿದೆ.

ಮುಖ್ಯಮಂತ್ರಿ ವಿಚಾರವಾಗಿ ಇದ್ದ ಗೊಂದಲ ಕೊನೆಗೂ ಬಗೆಹರಿದಿದ್ದು ಮೇ 20ರಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.