ಕ್ರೀಡೆರಾಷ್ಟ್ರೀಯ

IPL: ಭರ್ಜರಿ ಶತಕದೊಂದಿಗೆ ಹಲವು ದಾಖಲೆಗಳನ್ನು ಬರೆದ ಕಿಂಗ್ ಕೊಹ್ಲಿ



ಹೈದರಾಬಾದ್’ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ IPLನ 65ನೇ ಪಂದ್ಯದಲ್ಲಿ RCB ತಂಡದ ವಿರಾಟ್ ಕೊಹ್ಲಿ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ SRH ತಂಡ 186 ರನ್ಗಳಿಸಿತ್ತು. ಗುರಿ ಬೆನ್ನತ್ತಿದ RCB ಪರವಾಗಿ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು.

ಪವರ್ ಪ್ಲೇ ನಲ್ಲಿ 64 ರನ್ ಬಾರಿಸಿದ ಈ ಜೋಡಿ 12ನೇ ಓವರ್ ವೇಳೆಗೆ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು. ಅಲ್ಲದೆ ಇಬ್ಬರೂ ಕೂಡ 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. SRH ಬೌಲರ್ ಗಳನ್ನು ದಂಡಿಸಿದ ಕಿಂಗ್ ಕೊಹ್ಲಿ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದರು.94 ರನ್ಗಳಿಸಿದ್ದ ವೇಳೆ ಭುವನೇಶ್ವರ್ ಕುಮಾರ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಕೇವಲ 62 ಎಸೆತಗಳಲ್ಲಿ ಶತಕ ಪೂರೈಸಿದರು.

ಈ ಶತಕದೊಂದಿಗೆ IPL ನಲ್ಲಿ ಹಲವು ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.ಇದು ಐಪಿಎಲ್ನಲ್ಲಿನ ವಿರಾಟ್ ಕೊಹ್ಲಿ 6ನೇ ಶತಕ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಸೆಂಚುರಿ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಇದಕ್ಕೂ ಮುನ್ನ ಅಗ್ರಸ್ಥಾನದಲ್ಲಿ ಕ್ರಿಸ್ ಗೇಲ್ ಇದ್ದರು. ಗೇಲ್ ಒಟ್ಟು 6 ಶತಕ ಬಾರಿಸಿದ್ದರೂ, ಸದ್ಯ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.ಇನ್ನು ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಶತಕ ಬಾರಿಸಿದ ಭಾರತೀಯ ಬ್ಯಾಟ್ಸ್ ಮೆನ್ ಎಂಬ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಈ ಶತಕದೊಂದಿಗೆ IPL ನಲ್ಲಿ 7500 ರನ್ ಕೂಡ ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ 7 ಸಾವಿರದ ಐನೂರು ರನ್ ಕಲೆಹಾಕಿದ ಮೊದಲ ಬ್ಯಾಟ್ಸ್ ಮೆನ್ ಎಂಬ ಹೆಗ್ಗಳಿಕೆಗೆ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ

Leave a Reply

Your email address will not be published. Required fields are marked *

error: Content is protected !!