ಮುಖ್ಯಮಂತ್ರಿಗಳಿಗೆ ನೀಡುವ ಝೀರೋ ಟ್ರಾಫಿಕ್ ಸೌಲಭ್ಯ ತನಗೆ ಬೇಡ ಎಂದ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ನಿರ್ಧಾರವೊಂದನ್ನು ತೆಗೆದು ಮಾದರಿಯಾಗಿದ್ದಾರೆ. ಮುಖ್ಯಮಂತ್ರಿಗಳಿಗೆ ನೀಡುವ ಝೀರೋ ಟ್ರಾಫಿಕ್ ಸೌಲಭ್ಯ ತನಗೆ ಬೇಡ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ” ಎಂದು ತಿಳಿಸಿದ್ದಾರೆ.
ಝೀರೋ ಟ್ರಾಪಿಕ್ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.