ರಾಜ್ಯ

ಬೆಂಗಳೂರು: ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಮಹಿಳೆ ಸಾವು- ಸಿಎಂ ಸಿದ್ದರಾಮಯ್ಯ ಭೇಟಿ



ಬೆಂಗಳೂರು: ನಗರದ ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನುರೇಖಾ ಅವರ ಕುಟುಂಬ ವರ್ಗದವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ ಮಾರ್ಥಾಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದರು.

ಮೃತರ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರವನ್ನು ಸಿದ್ದರಾಮಯ್ಯ ಘೋಷಿಸಿದ್ದಾರೆ.


ಗಾಯಾಳುಗಳನ್ನು ಆಸ್ಪತ್ರೆಗೆ ತಕ್ಷಣ ದಾಖಲಿಸಿಕೊಳ್ಳದೆ ವಿಳಂಬ ಮಾಡಿದ್ದರ ಕುರಿತು ಮುಖ್ಯಮಂತ್ರಿಯವರು ತನಿಖೆಗೆ ಆದೇಶಿದ್ದಾರೆ.
ಸಿದ್ದರಾಮಯ್ಯರವರು ನಗರ ಪೊಲೀಸ್ ಆಯುಕ್ತರು ಮತ್ತು ಬಿಬಿಎಂಪಿ ಆಯುಕ್ತರ ಜತೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

Leave a Reply

Your email address will not be published. Required fields are marked *

error: Content is protected !!