ಜಿಲ್ಲೆ

ಕಾವೇರಿ ನದಿ ನೀರಿನಲ್ಲಿ ಮುಳುಗಿ ಬಾಲಕರಿಬ್ಬರು ಸಾವು

ಕಾವೇರಿ ನದಿ ನೀರಿನಲ್ಲಿ ಮುಳುಗಿ ಬಾಲಕರಿಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡಿನ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ. ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಲಕಾಡಿಗೆ ಈಜಲು ತೆರಳಿದ್ದ ಲೋಹಿತ್(15.ವ )ಹಾಗೂ ಯತೀಶ್(13. ವ) ಸಾವನ್ನಪ್ಪಿದವರು.

ಸಾಂದರ್ಭಿಕ ಚಿತ್ರ

ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ರವಿಗೌಡರ ಪುತ್ರರು, ಸ್ನೇಹಿತರ ಜೊತೆ ಬೆಂಗಳೂರಿನಿಂದ ತಲಕಾಡಿಗೆ ಹೋಗಿ ಈಜಲು ನದಿಗೆ ಇಳಿದಿದ್ದರು. ಈ ವೇಳೆ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

6 ಬಾಲಕರನ್ನು ರಕ್ಷಣೆ ಮಾಡಲಾಗಿದೆ. ತಲಕಾಡು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!