ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್.ಐ.ಆರ್
ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಬೆಳ್ತಂಗಡಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಹರೀಶ್ ಪೂಂಜಾ ಅವರು ಸಿದ್ದರಾಮಯ್ಯ 24 ಹಿಂದೂಗಳ ಕೊಲೆಗಾರ ಎನ್ನುವ ಅರ್ಥದಲ್ಲಿ ಮಾತನಾಡಿದ್ದು ವಿವಾದಕ್ಕೆ ಕಾರಣವಾಗಿದೆ.
ಇದರ ಬಗ್ಗೆ ಈಗಾಗಲೇ ಪುತ್ತೂರು ಮತ್ತು ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷ ಪೊಲೀಸ್ ದೂರು ನೀಡಿದ್ದು ಹರೀಶ್ ಪೂಂಜಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲೂ ಈ ಬಗ್ಗೆ ಆಕ್ರೋಶ ಭುಗಿಲೆದ್ದಿದ್ದು ಕಾಂಗ್ರೆಸ್ ಕಾರ್ಯಕರ್ತರು ಗರಂ ಆಗಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಗಂಭೀರ ಸುಳ್ಳು ಆರೋಪ ಮಾಡಿರುವ ಪೂಂಜಾ ವಿರುದ್ಧ ಇನ್ನಷ್ಟು ಕಡೆಗಳಲ್ಲಿ ದೂರು ನೀಡಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ಪ್ರಕರಣ ದಾಖಲು:
ನಮಿತಾ ಕೆ ಪೂಜಾರಿ ಬೆಳ್ತಂಗಡಿ ಠಾಣೆಗೆ ನೀಡಿದ ದೂರಿನ ಪ್ರಕಾರ ಶಾಸಕ ಹರೀಶ್ ಪೂಂಜಾ ಮತ್ತು ಕಾರ್ಯಕ್ರಮ ಆಯೋಜನೆ ಮಾಡಿದ ಜಯಂತ್ ಕೋಟ್ಯಾನ್ ಎಂಬುವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ
cr no 39/23 ಕಲಂ 153, 153A, 505 ipc ನೆದರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿರುತ್ತದೆ.