ಸಿಎಂ ಇಬ್ರಾಹಿಂ ರಾಜೀನಾಮೆ ಬೆನ್ನಲ್ಲೇ ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ
ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ರಾಜೀನಾಮೆ ನೀಡಿರುವ ಬೆನ್ನಲ್ಲೇ ಇದೀಗ ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಿದ್ದಾರೆ.
ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ. ಪಕ್ಷದ ಜತೆ ಸದಾ ನಿಲ್ಲುವೆ, ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಮನವಿ ಮಾಡಿರುವ ಅವರು ಸೋಲೇ ಅಂತಿಮವಲ್ಲ. ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ರಾಜೀನಾಮೆ ನೀಡಿದ್ದೇನೆ ಎಂದು ಪಕ್ಷದ ರಾಜೀನಾಮೆ ಪತ್ರವನ್ನು ಸಿಎಂ ಇಬ್ರಾಹಿಂ ಅವರಿಗೆ ರವಾನಿಸಿದ್ದಾರೆ.