ಸಂಪುಟ ವಿಸ್ತರಣೆ ಕಸರತ್ತು; ಹೈಕಮಾಂಡ್ ಜೊತೆ ಸಿದ್ದು, ಡಿಕೆಶಿ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟ ವಿಸ್ತರಣೆ ಸಂಬಂಧ ದೆಹಲಿಗೆ ತೆರಳಿದ್ದು ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇದ್ದರು.
ಸಚಿವ ಸ್ಥಾನ ಯಾರಿಗೆಲ್ಲ ಕೊಡಬೇಕು, ಯಾರಿಗೆ ಯಾವ ಖಾತೆ ನೀಡಬೇಕು ಎನ್ನುವುದು ಇಂದು ನಿರ್ಧಾರವಾಗಲಿದೆ ಎನ್ನಲಾಗಿದೆ. ಸಿದ್ದು ಹಾಗೂ ಡಿಕೆಶಿ ತಮ್ಮ ಆಪ್ತರನ್ನು ಸಚಿವರನ್ನಾಗಿ ಮಾಡಲು ಹಾಗೂ ಉತ್ತಮ ಖಾತೆ ಹಂಚಲು ಒತ್ತಡ ಹೇರುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು ಹೀಗಾಗಿ ಖಾತೆ ಹಂಚಿಕೆ ವಿಳಂಬವಾಗುತ್ತಿದೆ ಎನ್ನಲಾಗಿದೆ.
20 ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಂಡು, ಉಳಿದ ಸ್ಥಾನಗಳನ್ನು ಮತ್ತೆ ಭರ್ತಿ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಕೃಷ್ಣಭೈರೇಗೌಡ, ದಿನೇಶ್ ಗುಂಡೂರಾವ್, ಲಕ್ಷ್ಮಣ ಸವದಿ, ಹಾಗೂ ಲಕ್ಷ್ಮೀ ಹೆಬ್ಬಾಳಕರ್ ಈಗಾಗಲೇ ದೆಹಲಿಯಲ್ಲಿದ್ದು, ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.