ಸಂಪುಟ ರಚನೆ ಕಸರತ್ತು: 18 ಸಂಭವನೀಯ ಸಚಿವರ ಪಟ್ಟಿ ಇಲ್ಲಿದೆ
ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ಕಸರತ್ತು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರ ಜೊತೆ ಸಭೆ ನಡೆಸುತ್ತಿದ್ದಾರೆ. ತಮ್ಮ ಬೆಂಬಲಿಗರಿಗೆ ಮಂತ್ರಿ ಗಿರಿ ನೀಡಲು ಉಭಯ ನಾಯಕರು ಪೈಪೋಟಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಸಂಭವನೀಯ ಸಚಿವರ ಪಟ್ಟಿ ಇಲ್ಲಿದೆ:
ಲಕ್ಷ್ಮೀ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಶರಣಬಸಪ್ಪ ದರ್ಶನಾಪುರ, ಬಸವರಾಜ ರಾಯರೆಡ್ಡಿ, ಡಾ.ಹೆಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ವೆಂಕಟೇಶ್, ಎಸ್ಎಸ್ ಮಲ್ಲಿಕಾರ್ಜುನ, ಶಿವರಾಜ ತಂಗಡಗಿ, ಡಿ.ಸುಧಾಕರ್, ಹೆಚ್.ಕೆ.ಪಾಟೀಲ್, ಎನ್.ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ, ಭೈರತಿ ಸುರೇಶ್, ಕೃಷ್ಣ ಭೈರೇಗೌಡ, ರಹೀಂ ಖಾನ್, ಡಾ.ಅಜಯ್ ಸಿಂಗ್, ಸಿ.ಪುಟ್ಟರಂಗಶೆಟ್ಟಿ, ಪಿ.ಎಂ.ನರೇಂದ್ರಸ್ವಾಮಿ, ಎಂ.ಸಿ.ಸುಧಾಕರ್ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.





