ಉಪ್ಪಿನಂಗಡಿ: ಆಲಂಕಾರಿನಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಮಹಿಳೆಗೆ ಗಾಯ
ಮಹಿಳೆಯೊಬ್ಬರು ರಸ್ತೆಗೆ ಎಸೆಯಲ್ಪಟ್ಟ ಘಟನೆ ಆಲಂಕಾರಿನಲ್ಲಿ ನಡೆದಿದೆ. ಮಂಗಳೂರಿನಿಂದ ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ಸಿನಿಂದ ರಸ್ತೆಗೆ ಬಿದ್ದ ಮಹಿಳೆ ಗಾಯಗೊಂಡಿದ್ದಾರೆ.

ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುವ ದಾರಿಯ ಆಲಂಕಾರು ಎಂಬಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ಮಹಿಳೆಯೊಬ್ಬರು ರಸ್ತೆಗೆ ಬಿದ್ದಿದ್ದಾರೆ. ಮಹಿಳೆಯ ತಲೆಗೆ ಗಾಯವಾಗಿದ್ದು ಅವರನ್ನು ಗುಲಾಬಿ ಎಂದು ಗುರುತಿಸಲಾಗಿದೆ. ಗೋಳಿತ್ತಡಿ ಎಂಬಲ್ಲಿಂದ ಬಸ್ ನಲ್ಲಿ ಬಂದ ಮಹಿಳೆ ಆಲಂಕಾರಿನ ಮುಖ್ಯ ಪೇಟೆ ಸಮೀಪಿಸುತ್ತಿದಂತೆ ಬಸ್ಸಿನಿಂದ ಕೆಳಗೆ ಬಿದ್ದಿದ್ದಾರೆ.
ತಕ್ಷಣ ಅವರಿಗೆ ಸ್ಥಳೀಯ ಕ್ಲೀನಿಕ್ ನಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.