ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮಾನನಷ್ಟ ಮೊಕದ್ದಮೆ-ಹರೀಶ್ ಕುಮಾರ್ ಎಚ್ಚರಿಕೆ
ಸಿಎಂ ಸಿದ್ದರಾಮಯ್ಯ 24 ಮಂದಿ ಹಿಂದುಗಳನ್ನು ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದೆ 24 ಮಂದಿಯ ಕೊಲೆ ನಡೆಸಿದ್ದರೆ ಕಳೆದ ಮೂರುವರೆ ವರ್ಷ ಆಡಳಿತ ನಡೆಸಿದ್ದ ಬಿಜೆಪಿ ತನಿಖೆ ನಡೆಸದೆ ಮೌನವಾಗಿದ್ದುದು ಯಾಕೆ? ಶೇ.40ರಷ್ಟು ಕಮಿಷನ್ ಹಣವನ್ನು ಎಣಿಸುತ್ತಿತ್ತೇ ಎಂದು ಪ್ರಶ್ನಿಸಿದರು.