ಪುತ್ತೂರು: ಶಾಂತಿಮೊಗರು ಸೇತುವೆಯಿಂದ ಹಾರಿ ಉದ್ಯಮಿ ಆತ್ಮಹತ್ಯೆ
ಪುತ್ತೂರು: ಆಲಂಕಾರು ನಿವಾಸಿಯಾಗಿದ್ದು ಶ್ರೀ ದುರ್ಗಾಂಬಾ ಜನರಲ್ ಸ್ಟೋರ್‌ನ ಮಾಲಕ ಚಂದ್ರಶೇಖರ ಪೂಜಾರಿಯವರು ಶಾಂತಿಮೊಗರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೇ 26ರಂದು ಮುಂಜಾನೆ 5 ಗಂಟೆ ವೇಳೆಗೆ ಮನೆಯಲ್ಲಿ ಚೀಟಿ ಬರೆದು ತನ್ನ ಕಾರಿನಲ್ಲಿ ಶಾಂತಿಮೊಗರುಗೆ ಹೋದವರು ಅಲ್ಲಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.