ವಿದ್ಯಾರ್ಥಿಗಳ ಸಮ್ಮುಖದಲ್ಲೇ ಪ್ರಿನ್ಸಿಪಾಲ್ ಮತ್ತು ಶಿಕ್ಷಕಿ ನಡುವೆ ಹೊಡೆದಾಟ; ವಿಡಿಯೋ ವೈರಲ್
ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡದ್ದನ್ನು ಕೇಳಿದ್ದೇವೆ. ಆದರೆ ಬಿಹಾರದ ಪಾಟ್ನಾ ಜಿಲ್ಲೆಯ ಕೌರಿಯಾ ಪಂಚಾಯ್ತಿಯ ಬಿಹ್ತಾ ಮಿಡ್ಲ್ ಸ್ಕೂಲ್ ನ ಪ್ರಾಂಶುಪಾಲರು ಮತ್ತು ಶಿಕ್ಷಕಿ ವಿದ್ಯಾರ್ಥಿಗಳ ಎದುರೇ ಹೊಡೆದಾಡಿಕೊಂಡ ಘಟನೆ ವರದಿಯಾಗಿದೆ.

ಪ್ರಿನ್ಸಿಪಾಲ್ ಮತ್ತು ಶಿಕ್ಷಕಿಯ ಜಗಳವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲಾಗಿದ್ದು ವಿಡಿಯೋ ಇದೀಗ ವೈರಲ್ ಆಗಿದೆ. ಪ್ರಿನ್ಸಿಪಾಲ್ ಮತ್ತು ಶಿಕ್ಷಕಿ ನಡುವೆ ತರಗತಿಯಲ್ಲಿ ಚರ್ಚೆ ವಾಗ್ವಾದ ಆರಂಭಗೊಂಡಿದ್ದು ನಂತರ ಶಾಲೆಯ ಆವರಣದ ಹೊರಭಾಗದಲ್ಲಿ ಮಾರಾಮಾರಿ ನಡೆದಿದೆ.