ಸರಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ-ನಳಿನ್
ಮಂಗಳೂರು: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ದ್ವೇಷದ ರಾಜಕಾರಣವನ್ನು ವಿರೋಧಿಸಿ ಪ್ರತಿಭಟಿಸುತ್ತೇವೆ. ತಿಂಗಳ ಒಳಗೆ ಎಲ್ಲವೂ ಸರಿಯಾಗದಿದ್ದರೆ ಹೋರಾಟ ನಿಶ್ಚಿತ ಎಂದರು. ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಗಳ ಪೂರ್ಣ ತನಿಖೆ ನಡೆಯಲಿ. ಸಿದ್ಧರಾಮಯ್ಯ ಮೇಲಿರುವ ಲೋಕಾಯುಕ್ತ ಕೇಸ್ ಕೂಡಾ ತನಿಖೆ ಮಾಡಲಿ. ಕರಾವಳಿ ಜಿಲ್ಲೆಗೆ ಒಂದೂ ಮಂತ್ರಿ ಪಟ್ಟ ಇಲ್ಲ, ಈ ಬಗ್ಗೆ ಕೂಡ ದುಃಖ ಇದೆ ಎಂದು ನಳಿನ್ ತಿಳಿಸಿದ್ದಾರೆ.



