ಭೀಕರ ಅಪಘಾತ: 7 ವಿದ್ಯಾರ್ಥಿಗಳು ಮೃತ್ಯು
ಭೀಕರ ಕಾರು ಅಪಘಾತದಲ್ಲಿ ಅಸ್ಸಾಂ ಎಂಜಿನಿಯರಿಂಗ್ ಕಾಲೇಜಿನ 7 ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ.

ಗುವಾಹಟಿಯ ಜಾಲುಕ್ ಬಾರಿ ಪ್ರದೇಶದಲ್ಲಿರುವ ಎಇಸಿ ಕಾಲೇಜಿನ ಮೂರನೇ ವರ್ಷದ 10 ವಿದ್ಯಾರ್ಥಿಗಳು ಎಸ್ಯುವಿ ಕಾರಿನಲ್ಲಿ ಕಾಲೇಜು ಕ್ಯಾಂಪಸ್ ನಿಂದ ಹೊರಗೆ ವೇಳೆ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮತ್ತೊಂದು ಬದಿಯ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಸರಕು ಸಾಗಣೆ ಕಾರಿಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಏಳು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.