ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯ ಕಡಬ ಸಂಪರ್ಕ ರಸ್ತೆ ಸಂಚಾರ ಅಸ್ತವ್ಯಸ್ತ
ಭಾರಿ ಗಾಳಿ ಮತ್ತು ಮಳೆಯ ಪರಿಣಾಮ ಸುಬ್ರಹ್ಮಣ್ಯ ದಿಂದ ಕಡಬ ಸಂಪರ್ಕ ರಸ್ತೆ ಸಂಚಾರ ಕೆಲವು ಸಮಯ ಸಂಪೂರ್ಣ ಬಂದ್ ಆಗಿತ್ತು ಎಂದು ತಿಳಿದುಬಂದಿದೆ.

ಮರ್ಧಾಳದಲ್ಲಿ ಟಿಟಿ ವಾಹನದ ಮೇಲೆ ಮರ ಬಿದ್ದ ಪರಿಣಾಮ ವಾಹನ ಜಖಂಗೊಂಡಿದ್ದು ಪ್ರಯಾಣಿಕರು ಅದೃಷ್ಟವಶಾತ್ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ನೆಟ್ಟಣ, ಬಿಳಿನೆಲೆ, ಕೈಕಂಬ ಪ್ರದೇಶಗಳಲ್ಲಿ ರಸ್ತೆಗೆ ಮರಗಳು ಉರುಳಿದ ಪರಿಣಾಮ ರಸ್ತೆ ಸಂಪರ್ಕ ಬಂದ್ ಆಗಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದು, ಅಗ್ನಿಶಾಮಕ ದಳ ತಂಡ ಕಾರ್ಯಾಚರಣೆ ನಡೆಸುತ್ತಿದೆ.