ಸಾಹಿತಿಗಳು, ಬರಹಗಾರರ ಮೇಲಿನ ಸುಳ್ಳು ಮೊಕದ್ದಮೆ ಹಿಂದಕ್ಕೆ ಪಡೆಯತ್ತೇವೆ: ಸಿಎಂ ಸಿದ್ದರಾಮಯ್ಯ
ಸಾಹಿತಿ, ಬರಹಗಾರ, ಕನ್ನಡ ಹೋರಾಟಗಾರರು, ದಲಿತ ಚಳವಳಿಗಳ ಹೋರಾಟಗಾರರು, ರೈತ-ಕಾರ್ಮಿಕರ ಮೇಲೆ ಹಾಕಿದ್ದ ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಹೊಸ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಗಬ್ಬೆಬ್ಬಿಸಲು ಅವಕಾಶ ಕೊಡುವುದಿಲ್ಲ. ಈ ಬಗ್ಗೆ ಮತ್ತೊಮ್ಮೆ ಪ್ರತ್ಯೇಕವಾದ ಸಭೆ ಚರ್ಚಿಸಿ ಸರಿಯಾದ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.
ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್ ಗಳು, ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದ್ದೇನೆ. ಬರಹಗಾರರು ನೀಡಿರುವ ಮನವಿ ಪತ್ರದಲ್ಲಿನ ಸಂಗತಿಗಳನ್ನು ಗಂಭೀರವಾಗಿ ಪರಿಗಣಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.