ಕರಾವಳಿ

ಬಡವರ ದೀನ ದಲಿತರ ಶಕ್ತಿಯಾಗಿ ಜಾಂಭವ ಯುವಸೇನಾ ಸಂಘಟನೆ ಕಾರ್ಯಚರಿಸಲಿದೆ: ರಮೇಶ್ ಚಕ್ರವರ್ತಿ



ಸುಳ್ಯ: ಜಾಂಭವ ಯುವಸೇನಾ ಸಂಘಟನೆ ಬಡವರ ದೀನದಲಿತರ ಶಕ್ತಿಯಾಗಿ ಕರ್ನಾಟಕ ರಾಜ್ಯದ್ಯಂತ ಕಾರ್ಯಚರಿಸಲಿದೆ ಎಂದು ಕರ್ನಾಟಕ ರಾಜ್ಯ ಜಾಂಭವ ಯುವ ಸೇನಾ ರಿ. ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಡಾl ಎಸ್ಎಂ ರಮೇಶ್ ಚಕ್ರವರ್ತಿ ತಿಳಿಸಿದ್ದಾರೆ.

ಸಂಘಟನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಲಪಡಿಸುವ ಉದ್ದೇಶದಿಂದ ಇಂದು ಸುಳ್ಯಕ್ಕೆ ಭೇಟಿ ನೀಡಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ಸಂಘಟನೆಯ ಮುಖಂಡರೊಂದಿಗೆ ಸುಳ್ಯದ ಸದರ್ನ್ ರೆಸಿಡೆನ್ಸ್ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು ನಮ್ಮ ಸಂಘಟನೆಯು ಕಳೆದ ಹತ್ತು ವರ್ಷಗಳಿಂದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು ದೌರ್ಜನ್ಯ ಕ್ಕೊಳಗಾದ ಸಮುದಾಯದ ಜನತೆಗೆ, ಧೀನ ದಲಿತರ ಪರವಾಗಿ ಹಲವಾರು ಹೋರಾಟಗಳನ್ನು ನಡೆಸಿಕೊಂಡು ಬರುತ್ತಿದೆ. ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ದಲಿತ ಸಮುದಾಯದ 9 ಶಾಸಕರು ಸಚಿವರಾಗಿದ್ದು ಅವರ ಸಹಕಾರಗಳನ್ನು ಪಡೆದು ಸಮುದಾಯದ ಅಭಿವೃದ್ಧಿಗಾಗಿ ಸಂಘಟನೆ ಕೆಲಸ ಮಾಡುತ್ತದೆ ಎಂದು ಹೇಳಿದರು.

ದ ಕ ಜಿಲ್ಲಾ ಅಂಬೇಡ್ಕರ್ ರಕ್ಷಣಾ ವೇದಿಕೆಯ ಸಹಯೋಗದೊಂದಿಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸಂಘಟನೆಯನ್ನು ಬಲಪಡಿಸುವ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಅಂಬೇಡ್ಕರ್ ರಕ್ಷಣಾ ವೇದಿಕೆಯ ಅಧ್ಯಕ್ಷ ಸುಂದರ ಪಾಟಾಜೆಯವರೊಂದಿಗೆ ಸುದೀರ್ಘ ಚರ್ಚೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಜಾಂಭವ ಯುವ ಸೇನಾ ಸಂಘಟನೆಯ ಸದಸ್ಯರುಗಳಾದ ಸುಮತಿ ಬೆಟ್ಟಂಪಾಡಿ,ಸದಾಶಿವ, ಅಂಬೇಡ್ಕರ್ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ರಮೇಶ್ ಕೊಡಿಯಾಲ ಬೈಲು,ಜಿಲ್ಲಾ ಸಮಿತಿ ಕಾರ್ಯದರ್ಶಿ ಪರಮೇಶ್ವರ್ ಕೆಮ್ಮಿಂಜೆ, ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಹಮೀದ್ ನೆಲ್ಯಾಡಿ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಂಘಟನೆಯ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ನಡೆಯಿತು.
ಬಳಿಕ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕಳೆದ ಒಂದು ವರ್ಷಗಳಿಂದ ಎರಡು ಕಾಲುಗಳ ಸ್ವಾಧೀನವನ್ನು ಕಳೆದುಕೊಂಡು ಚಿಕಿತ್ಸೆ ಪಡೆಯುತ್ತಿರುವ ರವಿ ಜಯನಗರ ರವರನ್ನು ಭೇಟಿ ಮಾಡಿ ಆಹಾರ ಸಾಮಗ್ರಿಗಳ ಕಿಟ್ ನೀಡಿ ಆರೋಗ್ಯವನ್ನು ವಿಚಾರಿಸಿ ಸಾಂತ್ವನ ಹೇಳಿದರು.

Leave a Reply

Your email address will not be published. Required fields are marked *

error: Content is protected !!