ಕರಾವಳಿ

ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಧುರೀಣ; ತಾಲೂಕು ಪಂಚಾಯತ್ ಮಾಜಿ ಸದಸ್ಯ ಆರ್ತಿಕೆರೆ ಅಬ್ದುಲ್ ರಹಿಮಾನ್ ಹಾಜಿ ನಿಧನ



ಪುತ್ತೂರು: ಹಿರಿಯ ಕಾಂಗ್ರೆಸ್ ಮುಖಂಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರು ಆಗಿರುವ ಆರ್ತಿಕೆರೆ ಅಬ್ದುಲ್ ರಹಿಮಾನ್ ಹಾಜಿಯವರು ಜೂ.1ರಂದು ರಾತ್ರಿ ನಿಧನರಾಗಿದ್ದಾರೆ.

ಈ ಹಿಂದೆ ಸಾಮಾಜಿಕ ರಾಜಕೀಯ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಅಬ್ದುಲ್ ರಹಿಮಾನ್ ಹಾಜಿಯವರು ಮಸೀದಿಯ ಪದಾಧಿಕಾರಿಯಾಗಿ, ವಿವಿಧ ಸಂಘ ಸಂಸ್ಥೆಗಳ ಮುಖಂಡರಾಗಿ ಸೇವೆ ಸಲ್ಲಿಸಿದ್ದರು.

ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಲ್ಲಿ ಓರ್ವರಾಗಿದ್ದ ಇವರು ತಾಲೂಕು ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮೃತರ ದಫನ ಕಾರ್ಯ ಭಕ್ತ ಕೋಡಿ ಮಸೀದಿ ದಫನ ಸ್ಥಾನದಲ್ಲಿ ನೆರವೇರಲಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!