ಕ್ರೈಂರಾಷ್ಟ್ರೀಯ

ಭೀಕರ ರೈಲು ದುರಂತ: 50 ಮಂದಿ ಸಾವು, 300 ಮಂದಿಗೆ ಗಾಯ


ಭುವನೇಶ್ವರ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಭೀಕರ ಅಪಘಾತಕ್ಕೀಡಾಗಿದ್ದು 50 ಮಂದಿ ಸಾವಿಗೀಡಾಗಿದ್ದಾರೆ. ಸುಮಾರು 300 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.. ಹೌರಾದಿಂದ ಚೆನ್ನೈಗೆ ತೆರಳುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ಸಂಜೆ ಅಪಘಾತಕ್ಕೀಡಾಗಿದೆ. ಈ ರೈಲು ಒಡಿಶಾದ ಬಾಲಸೋರ್‌ನಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.

ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ 3 ಸ್ಲೀಪರ್ ಕೋಚ್‌ಗಳನ್ನು ಬಿಟ್ಟು ಉಳಿದ ಬೋಗಿಗಳು ಹಳಿತಪ್ಪಿದವು. ಆರಂಭಿಕ ಮಾಹಿತಿಯಲ್ಲಿ, ಈ ಕೋಚ್‌ಗಳ ಸಂಖ್ಯೆಯನ್ನು 18 ಎಂದು ಹೇಳಲಾಗಿದೆ. ಈ ಬೋಗಿಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಸಿಕ್ಕಿಹಾಕಿಕೊಂಡಿದ್ದು, ಅವರನ್ನು ರಕ್ಷಿಸಲು ಸ್ಥಳೀಯ ಜನರು ಜಮಾಯಿಸಿದ್ದಾರೆ ಎಂದು ತಿಳಿದುಬಂದಿದೆ.

ರಕ್ಷಣಾ ತಂಡಗಳೂ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆ.
ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳು ಸ್ಥಳಕ್ಕೆ ತೆರಳಿವೆ. ಪ್ರಸ್ತುತ ಸ್ಥಳಗದಲ್ಲಿಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಮತ್ತು ಎಸ್‌ಆರ್‌ಸಿಗೆ ರಾಜ್ಯ ಮಟ್ಟದಿಂದ ಯಾವುದೇ ಹೆಚ್ಚುವರಿ ಸಹಾಯದ ಅಗತ್ಯವಿದ್ದರೆ ಸ್ಥಳಕ್ಕೆ ತಲುಪಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.


ಘಟನೆ ಹೇಗೆ ನಡೆದಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಎರಡೂ ರೈಲುಗಳು ಒಂದೇ ಮಾರ್ಗದಲ್ಲಿ ಬಂದಿದ್ದರಿಂದ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸಿಗ್ನಲ್ ವೈಫಲ್ಯದಿಂದ ಎರಡೂ ರೈಲುಗಳು ಒಂದೇ ಹಳಿಯಲ್ಲಿ ಬಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಪ್ರಧಾನಿ ಮೋದಿ, ಮಮತಾ ಸಂತಾಪ
ರೈಲು ಅಪಘಾತದಲ್ಲಿ ಮರತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!