ರಾಜಕೀಯರಾಜ್ಯ

ಗ್ಯಾರಂಟಿ ಯೋಜನೆಯ ಫಲ ಬೇಡದವರು ವಿದ್ಯುತ್ ಬಿಲ್ ಕಟ್ಟಬಹುದು: ಡಿ.ಕೆ ಶಿವಕುಮಾರ್



ಗೃಹ ಜ್ಯೋತಿ ಯೋಜನೆಯ ಫಲ ತ್ಯಜಿಸಲು ಬಯಸುವವರಿಗೆ ಖಂಡಿತವಾಗಿಯೂ ಅವಕಾಶ ಕಲ್ಪಿಸುತ್ತೇವೆ. ಒಂದು ವೇಳೆ ಯಾರಿಗಾದರೂ ಈ ಯೋಜನೆ ಫಲ ಬೇಡವಾದರೆ ಅದನ್ನು ಅವರು ತ್ಯಜಿಸಿ ವಿದ್ಯುತ್ ಬಿಲ್ ಕಟ್ಟಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಅನೇಕ ಅಧಿಕಾರಿಗಳು, ಮಾಧ್ಯಮ ಮುಖ್ಯಸ್ಥರು, ಸರ್ಕಾರಿ ನೌಕರರು ಈ ಗೃಹಜೋತಿ ಯೋಜನೆಯ ಫಲ ಬೇಡ ಎಂದು ಪತ್ರ ಬರೆದಿದ್ದು, ಮತ್ತೆ ಕೆಲವರು ಖುದ್ದಾಗಿ ಹೇಳಿದ್ದಾರೆ. ಯಾರಿಗೆಲ್ಲ ಈ ಯೋಜನೆಯ ಲಾಭ ಬೇಡವೋ ಅವರಿಗೆ ಇದನ್ನು ತ್ಯಜಿಸಲು ಅವಕಾಶ ನೀಡಲಾಗುವುದು. ಅದಕ್ಕಾಗಿ ಈ ಯೋಜನೆಗಳ ಫಲ ಪಡೆಯಲು ಅರ್ಜಿಯನ್ನು ಕರೆಯಲಾಗಿದೆ. ಕೇಂದ್ರ ಸರ್ಕಾರ ಅಡುಗೆ ಅನಿಲ ಸಬ್ಸಿಡಿ ತ್ಯಜಿಸಲು ಕರೆ ಕೊಟ್ಟಾಗ ಅನೇಕರು ಅದಕ್ಕೆ ಸ್ಪಂದಿಸಿ ಸಬ್ಸಿಡಿಯನ್ನು ಕೈಬಿಟ್ಟಿದ್ದರು. ಅದೇ ರೀತಿ ಇಲ್ಲಿಯೂ ಯೋಜನೆ ಲಾಭ ತ್ಯಜಿಸಬಹುದು” ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!