ಸುಳ್ಯ ವೃತ್ತ ನಿರೀಕ್ಷಕರಾಗಿ ನವೀನ್ ಚಂದ್ರ ಜೋಗಿ
ಸುಳ್ಯ: ವಿಧಾನ ಸಭಾ ಚುನಾವಣಾ ಹಿನ್ನೆಲೆಯಲ್ಲಿ ವರ್ಗಾವಣೆಗೊಂಡಿದ್ದ ಸರ್ಕಲ್ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ಸ್ ಪೆಕ್ಟರ್ ಗಳನ್ನು ಈ ಹಿಂದೆ ಇದ್ದ ಠಾಣೆಗೆ ಮರು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದ ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿಯವರು ಮತ್ತೆ ಸುಳ್ಯ ವೃತ್ತಕ್ಕೆ ವರ್ಗಾವಣೆಗೊಂಡಿದ್ದಾರೆ.ಚುನಾವಣಾ ಸಂದರ್ಭದಲ್ಲಿ ಸುಳ್ಯ ವೃತ್ತ ನಿರೀಕ್ಷಕರಾಗಿ ರವೀಂದ್ರ ಅವರು ಕಾರ್ಯನಿರ್ವಹಿಸಿದ್ದರು.