ಕರಾವಳಿ

ಸುಳ್ಯ: ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ



ಸುಳ್ಯ ತಾಲೂಕು ಅರಂತೋಡು ಗ್ರಾಮದ ಅಡ್ತಲೆಯಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಜೂ 4 ರಂದು ಅಡ್ತಲೆ ಸರ್ಕಾರಿ ಶಾಲಾ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸ್ಥಳೀಯರಾದ ನಿವೃತ್ತ ಮಾಜಿ ಸೈನಿಕ ಕಮಲಾಕ್ಷರವರು ಉದ್ಘಾಟನೆ ಮಾಡಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಸುಂದರ ಪಾಟಾಜೆ ಡಾ. ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಸುಮಾರು 20 ಬಡ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಪುಸ್ತಕ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕೊಡಗು ಜಿಲ್ಲಾಧ್ಯಕ್ಷ ಉನೈಸ್ ಪೆರಾಜೆ ಸಂಘಟನೆಯ ಕುರಿತು ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.



ಸಂಘಟನೆಯ ಜಿಲ್ಲಾಧ್ಯಕ್ಷ ಈ ಸುಂದರ ಪಾಟಾಜೆ ಮಾತನಾಡಿ ಅರಮನೆಗಯ ಎಂಬಲ್ಲಿ ಸೇತುವೆ ಇಲ್ಲದೆ ನಮಗೊಂದು ಸೇತುವೆ ನಿರ್ಮಿಸಿ ಕೊಡಿ ಎಂದು ಸ್ಥಳೀಯ ನಿವಾಸಿಗಳು ಶಾಸಕರಾದ ಎಸ್ ಅಂಗಾರವರಿಗೆ 40 ವರ್ಷಗಳಿಂದ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ ಕಾರಣ ಈಗಿನ ಶಾಸಕರಾದ ಭಾಗೀರಥಿ ಮುರುಳ್ಯ ಇವರಿಗೆ ಸಂಘಟನೆ ವತಿಯಿಂದ ಅರಮನೆಗಯದಲ್ಲಿ ಸೇತುವೆ ನಿರ್ಮಿಸಿ ಕೊಡಬೇಕೆಂದು ಮನವಿ ನೀಡಲಾಗುವುದು ಎಂದು ಹೇಳಿದರು.

ವೇದಿಕೆಯಲ್ಲಿ ಸಂಘಟನೆಯ ಸುಳ್ಯ ತಾಲೂಕು ಅಧ್ಯಕ್ಷ ರಮೇಶ್ ಕೊಡೆಂಕೇರಿ, ಕಾರ್ಯದರ್ಶಿ ತೇಜಕುಮಾರ್, ಅರಂತೋಡು ಘಟಕದ ಅಧ್ಯಕ್ಷ ನವೀನ್ ಕಲ್ಲುಗುಡ್ಡೆ, ಕಾರ್ಯದರ್ಶಿ ರಾಧಾಕೃಷ್ಣ ಅರಮನೆಗಯ ಮಹಿಳಾ ಅಧ್ಯಕ್ಷೆ ಯಶೋದ ಅರಮನೆಗಯ ಮೊದಲಾದವರು ಉಪಸ್ಥಿತರಿದ್ದರು. ತಾಲೂಕು ಕಾರ್ಯದರ್ಶಿಯಾದ ತೇಜಕುಮಾರ್ ಸ್ವಾಗತಿಸಿ ವಂದಿಸಿದರು.
ಅಂಬೇಡ್ಕರ್ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!