ರಾಷ್ಟ್ರೀಯ

ಕೇರಳಕ್ಕೆ ಮುಂಗಾರು ಪ್ರವೇಶ ಕೆಲ ದಿನಗಳ ಕಾಲ ವಿಳಂಬವಾಗುವ ಸಾಧ್ಯತೆ ಇದೆ.



ಕೇರಳಕ್ಕೆ ಮುಂಗಾರು ಪ್ರವೇಶ ತಡವಾಗಲಿದ್ದು, ಜೊತೆಗೆ ಮುಂದಿನ 5 ದಿನಗಳವರೆಗೆ ಪೂರ್ವ ಭಾರತದಲ್ಲಿ ಬಿಸಿಗಾಳಿ ಮುಂದುವರೆಯಲಿದೆ.
ಈ ಕುರಿತು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಿಂದೂ ಮಹಾಸಾಗರದಲ್ಲಿ ಉಂಟಾದ ಫ್ಯಾಬಿಯನ್ ಚಂಡಮಾರುತ ಮಾನ್ಸೂನ್ ಮಾರುತಗಳನ್ನು ಸೆಳೆದಿದೆ. ಹೀಗಾಗಿ ಮುಂಗಾರು ಕೇರಳ ಪ್ರವೇಶ ತಡವಾಗಲಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಜೂನ್ 6 ರಿಂದ 8 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೈಸೂರು, ಮಂಡ್ಯ, ಕೋಲಾರ, ರಾಮನಗರ., ಚಿಕ್ಕಬಳ್ಳಾಪುರ, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ. ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!