ಟೆಸ್ಟ್ ಕ್ರಿಕೆಟ್’ನಲ್ಲಿ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಸಿಕ್ಸರ್ ಸಿಡಿಸಿದವರು ಯಾರು ಗೊತ್ತಾ..?
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವ ಟೆಸ್ಟ್ ಕ್ರಿಕೆಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಜೂ.7ರಿಂದ ಪ್ರಾರಂಭವಾಗಲಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರು ಒಂದು ಸಿಕ್ಸರ್ ಬಾರಿಸಿದ್ದಲ್ಲಿ ಮಾಸ್ಟಲ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಸಿಕ್ಸರ್ ದಾಖಲೆಯನ್ನು ಮುರಿಯಲಿದ್ದಾರೆ.
ತೆಂಡೂಲ್ಕರ್ 329 ಟೆಸ್ಟ್ ಇನ್ನಿಂಗ್ಸ್ನಲ್ಲಿ ಒಟ್ಟು 69 ಸಿಕ್ಸ್ ಬಾರಿಸಿದ್ದಾರೆ. ರೋಹಿತ್ ಶರ್ಮಾ ಕೇವಲ 83 ಇನ್ನಿಂಗ್ಸ್ನಲ್ಲಿ ಈಗಾಗಲೇ 69 ಸಿಕ್ಸ್ ಸಿಡಿಸಿದ್ದಾರೆ.
ಅಷ್ಟಕ್ಕೂ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ದಾಖಲೆ ವೀರೇಂದ್ರ ಸೆಹ್ವಾಗ್ ಹೆಸರಲ್ಲಿದೆ. ಸೆಹ್ವಾಗ್ ಅವರು 180 ಇನ್ನಿಂಗ್ಸ್ನಲ್ಲಿ 81 ಸಿಕ್ಸ್ ಸಿಡಿಸಿ ದಾಖಲೆ ನಿರ್ಮಿಸಿದ್ದಾರೆ.

ಮಹೇಂದ್ರ ಸಿಂಗ್ ಧೋನಿ 144 ಟೆಸ್ಟ್ ಇನ್ನಿಂಗ್ಸ್ನಲ್ಲಿ 78 ಸಿಕ್ಸ್ ಸಿಡಿಸಿ 2ನೇ ಸ್ಥಾನದಲ್ಲಿದ್ದಾರೆ.
ಸಚಿನ್ ತೆಂಡೂಲ್ಕರ್ ಮೂರನೇ ಸ್ಥಾನದಲ್ಲಿದ್ದು ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದಾರೆ. 184 ಇನ್ನಿಂಗ್ಸ್ನಲ್ಲಿ 61 ಸಿಕ್ಸ್ ಬಾರಿಸಿರುವ ಕಪಿಲ್ ದೇವ್ 5ನೇ ಸ್ಥಾನದಲ್ಲಿದ್ದಾರೆ.