ಕ್ರೈಂರಾಷ್ಟ್ರೀಯ

ಮಹಿಳೆಯನ್ನು ಕೊಂದು ಮೃತದೇಹವನ್ನು 20 ತುಂಡುಗಳಾಗಿ ಕತ್ತರಿಸಿದ ಆರೋಪಿ ಅರೆಸ್ಟ್



ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ತನ್ನೊಂದಿಗೆ ಸಹಜೀವನ ನಡೆಸುತ್ತಿದ್ದ ಮಹಿಳೆಯನ್ನು ಕೊಂದು ಆಕೆಯ ಮೃತದೇಹವನ್ನು 20 ತುಂಡುಗಳಾಗಿ ಕತ್ತರಿಸಿದ ಆರೋಪದಲ್ಲಿ 56 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಮುಂಬೈ ನ ಮಹಾನಗರದ ಮೀರಾ ರೋಡ್‌ನ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದೆ.

ಮಹಿಳೆಯ ದೇಹದ ತುಂಡುಗಳನ್ನು ಪ್ರೆಶರ್ ಕುಕ್ಕರ್‌ನಲ್ಲಿ ಕುದಿಸಿ ನಂತರ ಅವುಗಳನ್ನು ವಿಲೇವಾರಿ ಮಾಡಲು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಮನೋಜ್ ಸಹಾನಿ ಎಂದು ಗುರುತಿಸಲಾಗಿದ್ದು, ಕಳೆದ ಮೂರು ವರ್ಷಗಳಿಂದ ಮೀರಾ ರೋಡ್ ಪ್ರದೇಶದ ಆಕಾಶಗಂಗಾ ಕಟ್ಟಡದ ಬಾಡಿಗೆ ಫ್ಲಾಟ್‌ನಲ್ಲಿ ಸರಸ್ವತಿ ವೈದ್ಯ (35 ವ) ಎಂಬುವವರೊಂದಿಗೆ ವಾಸವಾಗಿದ್ದ.



ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ದೇಹದ ಭಾಗಗಳು ಮೂರ್ನಾಲ್ಕು ದಿನಗಳ ಹಿಂದೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡವು ಮಹಿಳೆಯ ಕೊಳೆತ ದೇಹವನ್ನು ಪತ್ತೆ ಹಚ್ಚಿದೆ, ಮೃತದೇಹವು ಹಲವಾರು ತುಂಡುಗಳಾಗಿ ಕತ್ತರಿಸಲ್ಪಟ್ಟಿದೆ.
ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ತನಿಖೆ ನಡೆಯುತ್ತಿದೆ ಎಂದು ಮುಂಬೈನ ಉಪ ಪೊಲೀಸ್ ಆಯುಕ್ತರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!