ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು; ಓರ್ವ ಮೃತ್ಯು
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಎರ್ಟಿಗಾ ಕಾರು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಎಂಬಲ್ಲಿ ರಸ್ತೆ ಬದಿಯ ಹೊಳೆಗೆ ಉರುಳಿ ಬಿದ್ದ ಘಟನೆ ಜೂ.11ರಂದು ಬೆಳಗಿನ ಜಾವ ನಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಹೊಸೂರು ನಿವಾಸಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುವನ್ನು ಆಂಬುಲೆನ್ಸ್ ಮೂಲಕ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ನೀರಿನಲ್ಲಿ ಮುಳುಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.