ಕರಾವಳಿ

ಮಂಗಳೂರು: ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ-ದಿನೇಶ್ ಗುಂಡೂರಾವ್

ಮಂಗಳೂರು: ಅಭಿವೃದ್ಧಿಗೆ ಪೂರಕವಾಗಿ ಕಾನೂನು ಸುವ್ಯವಸ್ಥೆ ಇರಬೇಕು. ಜಿಲ್ಲೆಯಲ್ಲಿ ಕೆಲವೊಮ್ಮೆ ಕಾನೂನು ಸುವ್ಯವಸ್ಥೆ ಹದಗೆಡುವುದನ್ನು ನಾನು ಗಮನಿಸಿದ್ದೇನೆ. ಮುಂದೆ ಯಾವತ್ತೂ ಇಂತಹ ಪರಿಸ್ಥಿತಿ ಬರಬರಬಾರದು. ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಯಾವುದೇ ಪಕ್ಷಪಾತವಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಜಿಲ್ಲೆಗೆ ಮೊದಲ ಬಾರಿ ಭೇಟಿ ನೀಡಿದ ಅವರು ರವಿವಾರ ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.



ಶಾಂತಿ , ಸಾಮರಸ್ಯಕ್ಕೆ ಪೂರಕವಾದ ವಾತಾವರಣ ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ನೀಡಬೇಕು. ಜಿಲ್ಲೆಯ ಶಾಂತಿ, ಸುವ್ಯವಸ್ಥೆ ನಮ್ಮ ಗುರಿ, ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು.


ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಶಾಸಕ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ, ರಾಜ್ಯ ಸಭೆಯ ಮಾಜಿ ಸದಸ್ಯ ಬಿ.ಇಬ್ರಾಹೀಂ, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಜಿ.ಪಂ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!