ಕ್ರೈಂರಾಜ್ಯ

ಗ್ಯಾಸ್ ಗೀಸರ್’ನ ವಿಷಾನಿಲ ಸೋರಿಕೆ: ಯುವಕ, ಯುವತಿ ಸಾವು



ಗ್ಯಾಸ್ ಗೀಸರ್ ನ ವಿಷಾನಿಲ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿರುವ ಬೆಂಗಳೂರಿನ ಚಿಕ್ಕಜಾಲದಲ್ಲಿ ಘಟನೆ ನಡೆದಿದೆ. ಗುಂಡ್ಲುಪೇಟೆಯ ಚಂದ್ರಶೇಖರ್ ಹಾಗೂ ಗೋಕಾಕ್ ನ ಸುಧಾರಾಣಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಚಂದ್ರಶೇಖರ್ ಮತ್ತು ಸುಧಾರಾಣಿ ಜೋಡಿ ಬೆಂಗಳೂರಿನ ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲ್ ನಲ್ಲಿ ಉದ್ಯೋಗದಲ್ಲಿದ್ದರು. ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು ಎನ್ನಲಾಗಿದೆ.
ಬೆಂಗಳೂರಿನ ತಬೇರನಹಳ್ಳಿಯಲ್ಲಿ ಜೂನ್ 10 ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.

ಎರಡು ದಿನಗಳಿಂದ ಮನೆಯಿಂದ ಯಾರೂ ಹೊರಗೆ ಬಾರದಿದ್ದಾಗ ಮನೆಯ ಮಾಲೀಕರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆ ಬಾಗಿಲು ಒಡೆದು ನೋಡಿದಾಗ ಇಬ್ಬರ ಶವ ಸ್ನಾನದ ಕೋಣೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!