ಕೊಡಗು: ಕರ್ನಾಟಕದ ಮೊದಲ 32 ಮೀ. ಉದ್ದದ ಗಾಜಿನ ಸೇತುವೆ ಉದ್ಘಾಟನೆ: ದ.ಭಾರತದ 2ನೇ ಸ್ಕಯ್ ವಾಕ್ ಬ್ರಿಡ್ಜ್
ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತಿ ಹೊಂದಿರುವ ಕೊಡಗು ಜಿಲ್ಲೆಯ ಮಡಿಕೇರಿ ಹೊರವಲಯದ ಉಡೋತ್ ಮೊಟ್ಟೆಯ ಪಪ್ಪೀಸ್ ಪ್ಲಾಂಟೇಷನ್‍ನಲ್ಲಿ ಸುಮಾರು 32 ಮೀಟರ್ ಉದ್ದದ 2 ಮೀಟರ್ ಅಗಲದ 78 ಅಡಿ ಎತ್ತರದಲ್ಲಿರುವ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಇಂದು ಲೋಕಾರ್ಪಣಗೊಂಡಿದೆ.
ಸುಮಾರು 5 ಟನ್ ಭಾರ ಹೊರುವ ಸಾಮರ್ಥ್ಯದ ಈ ಸೇತುವೆಯಲ್ಲಿ ಒಮ್ಮೆಗೆ 40-50 ಮಂದಿ ನಿಂತು ಪ್ರಕೃತಿಯ ಸೌಂದರ್ಯ ಸವಿಯಬಹುದು. ಇದು ಕರ್ನಾಟಕದ ಮೊದಲ ಉದ್ದದ ಗ್ಲಾಸ್ ಸೇತುವೆಯಾಗಿದ್ದು, ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಮುಖ್ಯಮಂತ್ರಿರವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ರವರು ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ ಉಪಸ್ಥಿತರಿದ್ದರು.
ಈ ಪ್ರವಾಸಿ ತಾಣದ ಟಿಕೆಟ್ ಕೌಂಟರನ್ನು ಮಡಿಕೇರಿ ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಎಂ.ನಂದಕುಮಾರ್ ಉದ್ಘಾಟಿಸಿದರು.
ಪ್ಲೆಂಟೇಷನ್‍ನ ವಾಕ್ ಪಾಟ್‍ಅನ್ನು ಮುಖಂಡರುಗಳಾದ ಕೇಕಡ ಗಣಪತಿ ಹಾಗೂ ದೇವಯ್ಯ ಉದ್ಘಾಟಿಸಿದರು. ಫೋಟೋ ಪಾಯಿಂಟನ್ನು ಉದ್ಯಾಮಿ ಗ್ರೀನ್ ಲ್ಯಾಂಡ್ ಶರಿನ್ ಉದ್ಘಾಟಿಸಿದರು.
ಈ ಸಂದರ್ಭ ಓಂಕಾರೇಶ್ವರ ದೇವಾಲಯದ ಮಾಜಿ ಅಧ್ಯಕ್ಷ ಪುಲಿಯಂಡ ಜಗದೀಶ್, ತುಳುವೆರ ಒಕ್ಕೂಟದ ಜಿಲ್ಲಾ ಖಜಾಂಚಿ ಪ್ರಭುರೈ, ಬೆಟ್ಟಗೇರಿ ಗ್ರಾ.ಪಂ ಸದಸ್ಯ ಗೋಪಾಲ, ಪ್ರಮುಖರಾದ ಮುಂಜಂದಿರ ಚಿಕ್ಕು ಕಾರ್ಯಪ್ಪ, ಅಜ್ಜಿಕುಟ್ಟೀರ ನರೇನ್ ಕಾರ್ಯಪ್ಪ, ಮಿದೇರಿರ ನವೀನ್ ಮೊದಲಾದವರು ಉಪಸ್ಥಿತರಿದ್ದರು.