ಫುಟ್ಬಾಲ್ ಸ್ಟಾರ್ ಲಿಯೋನೆಲ್ ಮೆಸ್ಸಿಯನ್ನು ವಶಕ್ಕೆ ಪಡೆದ ಚೀನಾ ಪೊಲೀಸರು
ಖ್ಯಾತ ಫುಟ್ಬಾಲ್ ಸ್ಟಾರ್ ಲಿಯೋನೆಲ್ ಮೆಸ್ಸಿ ಅವರನ್ನು ಚೀನಾ ಪೊಲೀಸರು ವಶಕ್ಕೆ ಪಡೆದ ಘಟನೆ ಜೂ 12ರಂದು ರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಚೀನಾದ ರಾಜಧಾನಿ ಬೀಜಿಂಗ್‌ನ ವರ್ಕರ್ಸ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅರ್ಜೆಂಟೀನಾ ಅಂತರರಾಷ್ಟ್ರೀಯ ಸೌಹಾರ್ದ ಪಂದ್ಯಕ್ಕೂ ಮುನ್ನ ಬೀಜಿಂಗ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಸೌಹಾರ್ದ ಪಂದ್ಯಕ್ಕಾಗಿ ಬೀಜಿಂಗ್ ಗೆ ಆಗಮಿಸಿದ್ದ ಮೆಸ್ಸಿಯನ್ನು ವೀಸಾ ಸಮಸ್ಯೆಯಿಂದಾಗಿ ಗಡಿ ಭದ್ರತಾ ಪಡೆ ಯೋಧರು ಕೆಲ ಕಾಲ ತಮ್ಮ ವಶದಲ್ಲಿರಿಸಿಕೊಂಡಿದ್ದರು. ಬಳಿಕ ವೀಸಾ ಕ್ಲಿಯರೆನ್ಸ್ ಆದ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.