ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ
ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಜೂ.13ರಂದು ಭೇಟಿ ನೀಡಿ
ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಜೊತೆ ಆರೋಗ್ಯ ಕೇಂದ್ರದ ಮಾಹಿತಿಯನ್ನು ಪಡೆದುಕೊಂಡರು.
ಕಡಬ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕಿನ ಉತ್ತಮ ಆರೋಗ್ಯ ಕೇಂದ್ರವಾಗಿ ರೂಪಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಶಾಸಕರು ಹೇಳಿದರು.
ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಕಡಬ ಹಾಗೂ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.