ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಿದ್ದರಾಮಯ್ಯ: ತಾಲೂಕು ಆಸ್ಪತ್ರೆಗಳಲ್ಲಿ ಎಂಆರ್‌ಐ, ಡಯಾಲಿಸಿಸ್ ಯಂತ್ರ ಅಳವಡಿಸದ್ದಕ್ಕೆ ಗರಂ ಆದ ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿದ ಬಳಿಕ ವಿವಿಧ ಇಲಾಖೆಗಳಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಇದೀಗ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ
ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್‌ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸದಿರುವುದಕ್ಕೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಸರಕಾರಿ ಆಸ್ಪತ್ರೆಗಳಲ್ಲಿ ಬಡಜನರಿಗೆ ಈ ವಿಶೇಷ ಸೇವೆಗಳನ್ನು ಒದಗಿಸದಿದ್ದರೆ ಅವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹೇಗೆ ಸಾದ್ಯ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮುಂದಿನ ಮೂರು ತಿಂಗಳಲ್ಲಿ ವ್ಯವಸ್ಥೆ ಸರಿಪಡಿಸಬೇಕು. ಸರಕಾರಿ ಆಸ್ಪತ್ರೆಗಳಿಗೆ ಜನ ಬರಬೇಕು. ಮೂರು ತಿಂಗಳಲ್ಲಿ ಮತ್ತೂಮ್ಮೆ ಪರಿಶೀಲನೆ ನಡೆಸುತ್ತೇನೆ. ಇದೇ ಪರಿಸ್ಥಿತಿ ಮುಂದುವರಿದರೆ ಅಧಿಕಾರಿಗಳೇ ಜವಾಬ್ದಾರರು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.