ರಾಜ್ಯ

ಇಂದು ಸಿಇಟಿ ಫಲಿತಾಂಶ ಪ್ರಕಟ



ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)-2023ರ ಫಲಿತಾಂಶ ಜೂ.15ರಂದು ಬೆಳಗ್ಗೆ 9.30ಕ್ಕೆ ಪ್ರಕಟವಾಗಲಿದೆ. ಸಿಇಟಿ ಫಲಿತಾಂಶ ಬಿಡುಗಡೆಯಾದ ನಂತರ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ http://kea.kar.nic.inಗೆ ಭೇಟಿ ನೀಡಿ ಫಲಿತಾಂಶವನ್ನು ಪರಿಶೀಲನೆ ಮಾಡಬಹುದಾಗಿದೆ ಎಂದು ಕೆಇಎ ತಿಳಿಸಿದೆ.

ಸಾಂದರ್ಭಿಕ ಚಿತ್ರ

ಇಂಜಿನಿಯರಿಂಗ್, ಆರ್ಕಿಟೆಕ್ಟರ್,ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್‌ಸಿ ನರ್ಸಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿಯನ್ನು ನಡೆಸಲಾಗುತ್ತದೆ. ಈ ವರ್ಷ ಒಟ್ಟು 2.6 ಲಕ್ಷ ವಿದ್ಯಾರ್ಥಿಗಳು ಸಿಇಟಿ ಬರೆದಿದ್ದರು. ರಾಜ್ಯಾದ್ಯಂತ 592 ಪರೀಕ್ಷಾ ಕೇಂದ್ರಗಳಲ್ಲಿ ಮೇ 20 ರಿಂದ ಮೇ 22ರವರೆಗೆ ಸಿಇಟಿ ಪರೀಕ್ಷೆ ನಡೆಸಲಾಗಿತ್ತು.

ಸುಮಾರು 16,000 ಕನ್ನಡೇತರ ವಿದ್ಯಾರ್ಥಿಗಳು ಈ ಪರೀಕ್ಷೆ ತೆಗೆದುಕೊಂಡಿದ್ದಾರೆ. ಮೇ 26 ರಂದು ಕೆಇಎ ತಾತ್ಕಾಲಿಕ ಉತ್ತರ ಕೀಯನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಮೇ 30ರ ವರೆಗೆ ಕಾಲಾವಕಾಶ ನೀಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!