ಕೇಂದ್ರ ಸರ್ಕಾರ ಅಕ್ಕಿ ನೀಡದಿದ್ದರೆ ಹೊರಟ ಮಾಡ್ತೇವೆ-ಡಿಕೆಶಿ
ಕೇಂದ್ರ ಸರ್ಕಾರ ಅಕ್ಕಿ ನೀಡದಿರುವುದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಮತ್ತು ನಾವು ಪುಕ್ಸಟ್ಟೆ ಕೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ನಮಗೆ ಕೊಡಬೇಕಾಗುತ್ತೆಂದು ಎಲ್ಲಾ ರಾಜ್ಯಕ್ಕೂ ಕೊಡಲ್ಲ ಅಂದಿದ್ದಾರೆ. ಈ ಬಗ್ಗೆ ದೊಡ್ಡ ಹೋರಾಟ ಮಾಡುತ್ತೇವೆ, ರೂಪುರೇಷೆ ಬಗ್ಗೆ ಹೇಳುತ್ತೇನೆ ಎಂದರು.
ಕರ್ನಾಟಕ ರಾಜ್ಯದ ರೈತರಿಂದಲೇ ಅಕ್ಕಿ ಖರೀದಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಓಪನ್ ಮಾರ್ಕೆಟ್‌ನಲ್ಲಿ ಅಕ್ಕಿ ಖರೀದಿ ಮಾಡಲು ಸಾಧ್ಯವಿಲ್ಲ. ಕೆಲವು ಸಂಸ್ಥೆಗಳು, ಬೇರೆ ಏಜೆನ್ಸಿಗಳ ಮೂಲಕ ಖರೀದಿ ಮಾಡಬೇಕು. ಯಾರ ಬಳಿಯೂ ಬೆಟ್ಟು ತೋರಿಸುಕೊಳ್ಳುವ ರೀತಿ ಕೆಲಸ ಮಾಡುವುದಿಲ್ಲ. ತಿನ್ನುವ ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಹೇಳಿದರು.