ಕಾಂಗ್ರೆಸ್ ‘ಶಕ್ತಿ’ ಯೋಜನೆ: ತುಂಬಿ ತುಳುಕಿದ ಸರಕಾರಿ ಬಸ್: ಪುಣ್ಯ ಕ್ಷೇತ್ರಗಳಿಗೆ ತೆರಳುವ ಮಹಿಳೆಯರ ಸಂಖ್ಯೆಯಲ್ಲಿ ಹೆಚ್ಚಳ
ಕಾಂಗ್ರೆಸ್ ಸರಕಾರದ ಶಕ್ತಿ ಯೋಜನೆ ಜಾರಿ ಆದ ಬಳಿಕ ಇದೇ ಮೊದಲ ವೀಕೆಂಡ್ ಆಗಿದ್ದು ರಾಜ್ಯಾದ್ಯಂತ ಬಹುತೇಕ ಪುಣ್ಯ ಕ್ಷೇತ್ರಗಳು ಮಹಿಳೆಯರಿಂದ ತುಂಬಿ ತುಳುಕಿರುವ ಬಗ್ಗೆ ವರದಿಯಾಗಿದೆ.

ಇಂದು ವೀಕೆಂಡ್ ಹಾಗೂ ಅಮವಾಸ್ಯೆ ಹಿನ್ನೆಲೆ ಮಹಿಳೆಯರು ಕುಟುಂಬ ಸಮೇತರಾಗಿ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ಬಸ್ ಗಳು ತುಂಬಿ ತುಳುಕಿದೆ. ಈ ಹಿಂದೆಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪುಣ್ಯಕ್ಷೇತ್ರಗಳಿಗೆ ತೆರಳುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಿದ್ದರಾಮಯ್ಯ ಸರಕಾರದ ಶಕ್ತಿ ಯೋಜನೆಯ ಲಾಭವನ್ನು ಮಹಿಳೆಯರು ಸಂಪೂರ್ಣವಾಗಿ ಪಡೆದುಕೊಳ್ಳುತ್ತಿದ್ದು ಕುಟುಂಬ ಸಮೇತರಾಗಿ ಪುಣ್ಯ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಶಕ್ತಿ ಯೋಜನೆ ಯಶಸ್ಸಿನ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ ಸಂತಸ ವ್ಯಕ್ತಡಿಸಿದ್ದಾರೆ.