ಪುರುಷರಿಗೂ ಉಚಿತ ಬಸ್ ಸೌಲಭ್ಯ ಕಲ್ಪಿಸಲು ವಾಟಾಳ್ ನಾಗರಾಜ್ ಆಗ್ರಹ
ಮಹಿಳೆಯರಂತೆ ಪುರುಷರೂ ಮತದಾನ ಮಾಡಿದ್ದಾರೆ.
ಹಾಗಿರುವಾಗ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಸೌಲಭ್ಯ ನೀಡುವುದು ಸರಿಯಲ್ಲ. ಪುರುಷರಿಗೂ ಉಚಿತ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸರಕಾರವನ್ನು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರುಷರಿಗೂ ಉಚಿತ ಬಸ್ ಸೌಲಭ್ಯ ಯೋಜನೆ ಜಾರಿಗೆ ತರುವಂತೆ ಶೀಘ್ರವೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.