ರಾಜಕೀಯರಾಜ್ಯ

‘ಬಿಜೆಪಿ ನಾಯಕರಿಂದ ಹೊಂದಾಣಿಕೆ ರಾಜಕಾರಣ’ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ನಳಿನ್

ಬೆಂಗಳೂರು: ಹೊಂದಾಣಿಕೆ ರಾಜಕಾರಣ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯಲ್ಲಿ ಕೆಲವು ಮಂದಿ ನಾಯಕರು ಹೊಂದಾಣಿಕೆ ರಾಜಕಾರಣ ಮಾಡಿದ್ದಾರೆ ಎಂಬ ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಸ್ಪಷ್ಟನೆ ನೀಡಿದ ಕಟೀಲ್, ಬಿಜೆಪಿಯಲ್ಲಿ ಎಲ್ಲಿಯೂ ಹೊಂದಾಣಿಕೆ ರಾಜಕಾರಣ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಆರ್. ಅಶೋಕ್, ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಅವರನ್ನು ಕಣಕ್ಕೆ ಇಳಿಸಿದ್ದೆವು. ಎಲ್ಲಿದೆ ಹೊಂದಾಣಿಕೆ ರಾಜಕಾರಣ ಎಂದು ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.

ಪ್ರತಾಪ್ ಸಿಂಹ ಅವರ ಭಾವನೆಗೆ ಅನುಗುಣವಾಗಿ ಮಾತನಾಡಿದ್ದು ಅವರನ್ನು ಕರೆದು ಮಾತನಾಡುತ್ತೇವೆ. ಸರ್ಕಾರದ ಅಭಿವೃದ್ಧಿ ಪೂರಕ ಕಾರ್ಯಗಳಿಗೆ ನಮ್ಮ ಸಹಕಾರ ಇರುತ್ತದೆ. ಕೆಟ್ಟ ಆಡಳಿತದವಿರುದ್ಧ ಸರಕಾರದ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಕಟೀಲ್ ತಿಳಿಸಿದ್ದಾರೆ

ಡಿಸೆಂಬರ್ ನಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಎಲ್ಲರೂ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಸಿಎಂ ವಿಚಾರಕ್ಕೆ ಡಿಸೆಂಬರ್ನಲ್ಲಿ ಸರ್ಕಾರ ಪತನವಾಗಲಿದೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!