ನರಿಮೊಗರು: ಕಾಂಗ್ರೆಸ್ ಕಾರ್ಯಕರ್ತ ಪ್ರವೀಣ್ ಆಚಾರ್ಯ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು
ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿ ಮನೆಗೆ ನುಗ್ಗಿ ಜೀವ ಬೆದರಿಕೆಯೊಡ್ಡಿರುವ ಪ್ರಕರಣ ನಡೆದಿದೆ. ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ ಹಲ್ಲೆಗೊಳಗಾದವರು. ಹಿಂದೂ ಸಂಘಟನೆ ಕಾರ್ಯಕರ್ತನೊಬ್ಬ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.

ರಾಜಕೀಯ ವೈಷಮ್ಯ ಹಲ್ಲೆಗೆ ಕಾರಣ ಎನ್ನಲಾಗುತ್ತಿದೆ. ಹಲ್ಲೆಗೀಡಾದ ಪ್ರವೀಣ್ ಗೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.