ನಾಯಿ ಅಡ್ಡ ಬಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಸ್ಕೂಟರ್: ಸವಾರ ಸಾವು
ನಾಯಿಯೊಂದು ರಸ್ತೆಯಲ್ಲಿ ಅಡ್ಡದಾಟಿದ ಪರಿಣಾಮ ಸ್ಕೂಟರ್ ಸವಾರ ಆಯತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ಯೆಯ್ಯಾಡಿ ಸಮೀಪ ನಡೆದಿದೆ.

ಮರೋಳಿ ಬಜ್ಜೋಡಿ ನಿವಾಸಿ ನರಸಿಂಹ ಗಟ್ಟಿ (67. ವ) ಮೃತರು. ಜೂ.23ರಂದು ಬೆಳಗ್ಗೆ ಮನೆಯಿಂದ ಯೆಯ್ಯಾಡಿ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದ ವೇಳೆ ನಾಯಿಯೊಂದು ಅಡ್ಡದಾಟಿದ ವೇಳೆ ನಿಯಂತ್ರಣ ತಪ್ಪಿದ ಸ್ಕೂಟರ್ ನಾಯಿಗೆ ಢಿಕ್ಕಿ ಹೊಡೆದಿದ್ದು, ಕೆಳಗೆ ಬೀಳುವಾಗ ಡಿವೈಡರ್ ತಲೆಗೆ ಬಡಿದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈ ವೇಳೆ ದಾರಿಮಧ್ಯೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.