ಯಶ್ಪಾಲ್ ಸುವರ್ಣರಿಗೆ ಬೆದರಿಕೆ ಪ್ರಕರಣ: ಓರ್ವನ ಬಂಧನ
ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಕಾಪು ಪೊಲೀಸರು ಜೂ. 22ರಂದು ಮುಂಬಯಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ಕರೆದುಕೊಂಡು ಬಂದಿದ್ಧಾರೆ. ಮಂಗಳೂರು ಬಜ್ಪೆ ನಿವಾಸಿ ಮಹಮ್ಮದ್ ಆಸಿಫ್ (32. ವ) ಬಂಧಿತ ಆರೋಪಿ.
ಕಳೆದ ಜೂನ್ ತಿಂಗಳಿನಲ್ಲಿ ಹಿಜಾಬ್ ವಿವಾದ ಸಂದರ್ಭ ಯಶಪಾಲ್ ಸುವರ್ಣ ಅವರಿಗೆ ಆರೋಪಿಗಳು ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆಯೊಡ್ಡಿದ್ದರು. ಈ ಬಗ್ಗೆ ಆರೋಪಿಗಳನ್ನು ಬಂಧಿಸುವಂತೆ ಕಾಪು ಕ್ಷೇತ್ರ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು ಕಾಪು ಠಾಣೆಗೆ ದೂರು ನೀಡಿದ್ದರು.
ಪ್ರಮುಖ ಆರೋಪಿಯನ್ನು ಕಾಪು ಪೊಲೀಸರು ಈ ಹಿಂದೆಯೇ ಬಂಧಿಸಿದ್ದು, ಆಸಿಫ್ ತಲೆಮರೆಸಿಕೊಂಡಿದ್ದ. ವಿದೇಶದಿಂದ ಬಂದು ಮುಂಬಯಿ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ಧಾರೆ.