ಟೀಮ್ ಇಂಡಿಯಾ ಆಟಗಾರ ಕೆ.ಎಲ್.ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ
ಟೀಮ್ ಇಂಡಿಯಾ ಆಟಗಾರ ಕೆ.ಎಲ್.ರಾಹುಲ್ ಅವರು ಜೂ. 25ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ
ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದುಕೊಂಡರು.

ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಹೆಗ್ಗಡೆ ಕುಟುಂಬದವರು ಜತೆಯಲ್ಲಿದ್ದರು.
ಐಪಿಎಲ್ ವೇಳೆ ಗಾಯಗೊಂಡಿದ್ದ ಕೆಎಲ್ ರಾಹುಲ್ ಅವರು ಲಂಡನ್ ನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.