ರಾಜ್ಯ

5 ಕೆ.ಜಿ ಅಕ್ಕಿ ಬದಲು ಹಣ: ಸರಕಾರದ ನಿರ್ಧಾರ

ಬೆಂಗಳೂರು: ಕಾಂಗ್ರೆಸ್ ಚುನಾವಣಾಪೂರ್ವ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ಅಕ್ಕಿ ವಿತರಣೆಗೆ ತೊಡಕಾಗಿರುವುದರಿಂದ ಐದು ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಕುರಿತು ಆಹಾರ ಸಚಿವ ಮುನಿಯಪ್ಪ ಮಾಹಿತಿ ನೀಡಿದರು.
ಅಕ್ಕಿ ಬದಲು ಜನರಿಗೆ ಹಣ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ. 5 ಕೆಜಿ ಅಕ್ಕಿ ಬದಲು ಜನರಿಗೆ ಹಣ ನೀಡಲು ನಿರ್ಧರಿಸಲಾಗಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್ ದಾರರಿಗೆ ಮಾಸಿಕ ತಲಾ 170 ರೂ. ನೀಡುತ್ತೇವೆ. ಜುಲೈ ತಿಂಗಳಿಂದಲೇ ಪಡಿತರದಾರರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಮುನಿಯಪ್ಪ ತಿಳಿಸಿದರು.

ಅಕ್ಕಿ ಸಿಗವವರೆಗೆ ಮಾತ್ರ ಹಣ:
ಅಕ್ಕಿ ಸಿಗುವವರೆಗೆ ಮಾತ್ರ ಪರ್ಯಾಯ ವ್ಯವಸ್ಥೆಯಾಗಿ ಹಣ ನೀಡುತ್ತಿದ್ದೇವೆ. ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!