ಲೋಕಾಯುಕ್ತ ದಾಳಿ ವೇಳೆ ಅಕ್ರಮ ಆಸ್ತಿ, ಸಂಪತ್ತು ಪತ್ತೆಯಾದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬೆಂಗಳೂರಿನಲ್ಲಿ ತಹಶೀಲ್ದಾರ್ ಆಗಿರುವ ಪುತ್ತೂರು ತಾಲೂಕು ಸೊರಕೆಯ ಅಜಿತ್ ರೈ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೋರ್ಟ್ ಅವರನ್ನು ಹೆಚ್ಚಿನ ತನಿಖೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ ಎಂದು ತಿಳಿದು ಬಂದಿದೆ.