ಕರಾವಳಿರಾಜಕೀಯ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬ ಕಚೇರಿ ಉದ್ಘಾಟನೆ

ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬ ತಾಲೂಕಿನ ಶಾಸಕರ ಕಚೇರಿ ಜೂ.30 ರಂದು ಕಡಬ ಮಿನಿ ವಿಧಾನಸೌಧದಲ್ಲಿ ಕಾರ್ಯಾರಂಭ ಮಾಡಿತು ಬೆಳಿಗ್ಗೆ ಗಣಹೋಮದ ಬಳಿಕ ದೀಪ ಪ್ರಜ್ವಲನೆ ಮಾಡಿ ಉದ್ಘಾಟನೆ ನಡೆಯಿತು.

ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಹರಿಶ್ಚಂದ್ರ ರೈ ಪಟ್ಟೆಗುತ್ತು ಪೆರಾಬೆ, ತನಿಯಪ್ಪ ಮಜಗುಡ್ಡೆ ಕಡಬ, ಕುಶಾಲಪ್ಪ ಗೌಡ ಕುಡಾಲ ಅವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ಎ.ವಿ.ತೀರ್ಥರಾಮ, ಆಶಾ ತಿಮ್ಮಪ್ಪ, ವೆಂಕಟ್ ವಳಲಂಬೆ, ಕೃಷ್ಣ ಶೆಟ್ಟಿ ಕಡಬ ಮತ್ತಿತರ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!